ನಿಷೇಧಾಜ್ಞೆ ಉಲ್ಲಂಘಿಸಿ ಹೊರಗಡೆ ಓಡಾಡ್ತಿದ್ದವರಿಗೆ ಲಾಠಿ ರುಚಿ ತೋರಿದ ಪೊಲೀಸರು - coronavirus news
ಹುಬ್ಬಳ್ಳಿ/ ಬಳ್ಳಾರಿ : ಕೊರೊನಾ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಗಟ್ಟಿ ನಿರ್ಧಾರ ತೆಗೆದುಕೊಂಡಿರುವ ಸರ್ಕಾರ ರಾಜ್ಯಾದ್ಯಂತ ಲಾಕ್ಡೌನ್ ಆದೇಶ ಹೊರಡಿಸಿ, ನಿಷೇಧಾಜ್ಞೆ ಜಾರಿಗೊಳಿಸಿದೆ. ಹೀಗಾಗಿ ಯಾರೂ ತಮ್ಮ ಮನೆ ಬಿಟ್ಟು ಹೊರ ಬರುವಂತಿಲ್ಲ. ಆದ್ರೆ, ನಮ್ಮ ಜನ ಮಾತ್ರ ಇದನ್ನೆಲ್ಲ ಗಂಭೀರವಾಗಿ ಪರಿಗಣಿಸಿಲ್ಲ. ಹೀಗಾಗಿ ಹುಬ್ಬಳ್ಳಿ, ರಾಯಚೂರು, ಬಳ್ಳಾರಿ ಮತ್ತು ಚಿಕ್ಕೋಡಿ ನಗರಗಳಲ್ಲಿ ನಿಯಮ ಉಲ್ಲಂಘಿಸಿ ರಸ್ತೆಗಳಲ್ಲಿ ಓಡಾಡುತ್ತಿರುವವರಿಗೆ ಪೊಲೀಸರು ಲಾಠಿ ಏಟಿನ ಪಾಠ ಹೇಳಿಕೊಟ್ಟರು.