ಮತದಾರದಲ್ಲಿ ಧೈರ್ಯ ತುಂಬಲು ಪೊಲೀಸರಿಂದ ಪಥಸಂಚಲನ - kannada news
ಬೆಂಗಳೂರು: ಮತದಾನದ ಸಂದರ್ಭ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮತದಾರರಲ್ಲಿ ಧೈರ್ಯ ತುಂಬುವ ಸಲುವಾಗಿ ಪೊಲೀಸರಿಂದ ಪಥಸಂಚಲನ ಮಾಡಲಾಯಿತು. ಲೋಕಸಭಾ ಚುನಾವಣೆ ಹಿನ್ನೆಲೆ ಮತದಾರರಲ್ಲಿ ಧೈರ್ಯ ತುಂಬುವ ಸಲುವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದಲ್ಲಿ ಪೊಲೀಸರಿಂದ ಪಥಸಂಚಲನ ಹಮ್ಮಿಕೊಳ್ಳಲಾಗಿತ್ತು. ಸುಮಾರು 250ಕ್ಕೂ ಹೆಚ್ಚು ಪೊಲೀಸರು ಹಾಗೂ ಅರೆಸೇನಾ ಪಡೆಯ ಸಿಬ್ಬಂದಿ ಸುಮಾರು 5 ಕಿ.ಮೀ. ಪಥಸಂಚಲನ ಮಾಡಿ ಮತದಾರರಲ್ಲಿ ಧೈರ್ಯ ತುಂಬಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ರಾಮ್ ನಿವಾಸ ಸಪಟ್ ನೇತೃತ್ವದಲ್ಲಿ ಡಿವೈಎಸ್ಪಿ ನಿಂಗಪ್ಪ ಸಕ್ರಿ ಹಾಗೂ ತಾಲೂಕಿನ ಎಲ್ಲಾ ಪೊಲೀಸ್ ಅಧಿಕಾರಿಗಳು ಸಾಥ್ ನೀಡಿದರು.