
ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ನ್ಯಾಯಾಧೀಶರು! - ಕೋಲಾರ ಪೊಲೀಸ್ ಕ್ರಿಡಾಕೂಟ
ಕೋಲಾರ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಎರಡು ದಿನಗಳ ಕಾಲ ಪೊಲೀಸ್ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದ್ದು, ಕ್ರೀಡಾಕೂಟವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಐ. ಎಫ್. ಬಿದರಿ ಪಾರಿವಾಳ ಹಾರಿ ಬಿಡುವ ಮೂಲಕ ಚಾಲನೆ ನೀಡಿದ್ರು. ಕ್ರೀಡಾಕೂಟದಲ್ಲಿ ಕೋಲಾರ ಸೇರಿದಂತೆ ಮುಳಬಾಗಲು, ಮಾಲೂರು, ಶ್ರೀನಿವಾಸಪುರ ಪೊಲೀಸ್ ತಂಡಗಳು ಭಾಗವಹಿಸಿದವು. ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜೆ. ಮಂಜುನಾಥ್, ಜಿಲ್ಲಾ ರಕ್ಷಣಾಧಿಕಾರಿ ಕಾರ್ತಿಕ್ ರೆಡ್ಡಿ, ಎಎಸ್ಪಿ ಜಾನವಿ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.