ಸರ್ಕಾರದ ಆದೇಶ ಉಲ್ಲಂಘಿಸಿ ಮಸೀದಿಯಲ್ಲಿ ಪ್ರಾರ್ಥನೆ... ಲಾಠಿ ರುಚಿ ತೋರಿಸಿದ ಪೊಲೀಸ್ - violation lockdown rules in hasan
ಜಿಲ್ಲಾಡಳಿತದ ಆದೇಶವನ್ನ ಉಲ್ಲಂಘಿಸಿ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿರೋ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದ ಲಾಠಿ ಚಾರ್ಜ್ ಮಾದರಿಯಲ್ಲಿಯೇ ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದ ಪೇಟೆ ಬೀದಿಯ ಜಾಮೀಯಾ ಮಸೀದಿಯಲ್ಲಿ ನಡೆದಿದೆ. ಸರ್ಕಾರದ ಆದೇಶ ಉಲ್ಲಂಘಿಸಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಹಾಗಾಗಿ ಸುಮಾರು 20ಕ್ಕೂ ಅಧಿಕ ಮಂದಿಗೆ ಹಾಸನದ ಪೊಲೀಸ್ರು ಲಾಠಿ ರುಚಿ ತೋರಿಸಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಪರಿಣಾಮಕಾರಿ ಮದ್ದು ಎಂದು ಪ್ರತಿದಿನವೂ ಮನವರಿಕೆ ಮಾಡಿಕೊಡಲಾಗ್ತಿದೆ. ಆದ್ರೆ ಜನರು ಇದನ್ನು ಉಲ್ಲಂಘಿಸುತ್ತಿರುವುದು ಕಂಡುಬರುತ್ತಿದೆ.
TAGGED:
hasana latets news