ಕರ್ನಾಟಕ ಬಂದ್ಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ - response to Karnataka bund in Chikmagalur
ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದಂತಹ ಕರ್ನಾಟಕ ಬಂದ್ ಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಎಂದಿನಂತೆ ಜನಜೀವನ ನಡೆಯುತ್ತಿದ್ದು,ಬಸ್, ಆಟೋ, ಲಾರಿ ಸಂಚಾರ ನಡೆಯುತ್ತಿದೆ. ಅಂಗಡಿ-ಮುಂಗಟ್ಟುಗಳು ತೆರೆದಿದ್ದು, ವ್ಯಾಪಾರ-ವಹಿವಾಟು ಸಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ.
TAGGED:
Karnataka bund