ಅಮೆರಿಕಾ ಮೂಲದ ವಿವಿಯಿಂದ ಪ್ರಣವಾನಂದ ಸ್ವಾಮೀಜಿಗೆ ಗೌರವ ಡಾಕ್ಟರೆಟ್ ಪ್ರದಾನ - ಶ್ರೀ ಶರಣಬಸವೇಶ್ವರ ಮಠದ ಪೀಠಾಧಿಪತಿಯಾದ ಪ್ರಣವಾನಂದ ಸ್ವಾಮೀಜಿಯವರಿಗೆ ಗೌರವ ಡಾಕ್ಟರೆಟ್
ರಾಣೆಬೆನ್ನೂರು ತಾಲೂಕಿನ ಆರೇಮಲ್ಲಾಪುರ ಗ್ರಾಮದ ಶ್ರೀ ಶರಣಬಸವೇಶ್ವರ ಮಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿಯವರಿಗೆ ಗೌರವ ಡಾಕ್ಟರೆಟ್ ಪ್ರದಾನ ಮಾಡಲಾಗಿದೆ. ಮುಂಬೈನ ವಾಸಿಯಲ್ಲಿ ಕಾರ್ಯಕ್ರಮ ನಡೆದಿದ್ದು, ಅಮೆರಿಕಾದ ಗ್ಲೋಬಲ್ ಪೀಸ್ ಆಫ್ ಯುಎಸ್ಎ ವಿಶ್ವವಿದ್ಯಾಲಯ ಸಾಮಾಜಿಕ ಸೇವಾ ವಿಭಾಗದಲ್ಲಿ ಮಾಡಿದ ಸಾಧನೆ ಗುರುತಿಸಿ ಶ್ರೀಗಳಿಗೆ ಗೌರವ ಡಾಕ್ಟರೆಟ್ ನೀಡಿ ಪುರಸ್ಕರಿಸಿದೆ.