ಎಸ್.ಟಿ.ಸೋಮಶೇಖರ್ ಗೆಲುವಿಗೆ ಅಭಿನಂದನೆ ತಿಳಿಸಿದ ಪ್ರತಾಪ್ ಗೌಡ ಪಾಟೀಲ್ - ಸೋತ ಅನರ್ಹ ಶಾಸಕರಿಗೂ ಸೂಕ್ತ ಸ್ಥಾನಮಾನ ಸಿಗುವ ವಿಶ್ವಾಸ
ಮಸ್ಕಿ ಅನರ್ಹ ಶಾಸಕ ಪ್ರತಾಪ್ ಗೌಡ ಪಾಟೀಲ್ ಕೂಡ ಎಸ್.ಟಿ.ಸೋಮಶೇಖರ್ ಗೆಲುವಿನ ಸಂಭ್ರಮದಲ್ಲಿ ಪಾಲ್ಗೊಂಡರು. ಆರ್.ವಿ. ಎಂಜಿನಿಯರಿಂಗ್ ಕಾಲೇಜಿನ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿ ಎಸ್.ಟಿ.ಸೋಮಶೇಖರ್ಗೆ ಅಭಿನಂದನೆ ತಿಳಿಸಿದರು. ಇದೇ ವೇಳೆ ಈಟಿವಿ ಭಾರತದ ಜೊತೆ ಮಾತನಾಡಿದ ಅವರು, ಸೋತ ಅನರ್ಹ ಶಾಸಕರಿಗೂ ಸೂಕ್ತ ಸ್ಥಾನಮಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದರು.