ಹೊಸ ವರ್ಷಾಚರಣೆಗೆ ಸಿದ್ಧವಾಗಿದೆ ಬೆಂದಕಾಳೂರು... ಹೇಗಿದೆ ಭದ್ರತೆ? - New Year celebration in bangalore
ಬೆಂಗಳೂರಿನ ಎಂ.ಜಿ., ಬ್ರಿಗೇಡ್ ರಸ್ತೆಗಳು ಸೇರಿದಂತೆ ಪ್ರಮುಖ ಅಂಗಡಿ, ಮುಂಗಟ್ಟುಗಳು ಹೊಸ ವರ್ಷಾಚರಣೆಗೆ ಸಿದ್ಧವಾಗಿವೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆಗಳು ನವ ವಧುವಿನಂತೆ ಸಿಂಗಾರಗೊಂಡಿದ್ದು, ಯುವ ಸಮೂಹವನ್ನು ಆಕರ್ಷಿಸುತ್ತಿದೆ. ಹೊಸ ವರ್ಷಾಚರಣೆಯಲ್ಲಿ ಅಹಿತರ ಘಟನೆಗಳು ಜರುಗದಂತೆ ಪೊಲೀಸ್ ಬಿಗಿ ಭದ್ರತೆ ಜೊತೆಗೆ 50ಕ್ಕೂ ಅಧಿಕ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಹಾಕಲಾಗಿದೆ.