ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆಗೆ ಸಿದ್ಧತೆ: ಎಕ್ಸಾಂ ಹಾಲ್ಗೆ ಸ್ಯಾನಿಟೈಸರ್ ಸಿಂಪಡಣೆ - ಜೂನ್ 18 ರಂದು ದ್ವಿತೀಯ ಪಿಯು ಪರೀಕ್ಷೆ
ರಾಯಚೂರು: ಜೂನ್ 18 ರಂದು ನಡೆಯಲಿರುವ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆಗೆ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನ ಮಾಡಿಕೊಳ್ಳಲಾಗುತ್ತಿದೆ. ಪರೀಕ್ಷೆ ಕೇಂದ್ರಗಳನ್ನ ಸ್ವಚ್ಛತೆಗೊಳಿಸಿ, ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದೆ. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಡೆಸ್ಕ್‌ಗಳನ್ನ ಹೊಂದಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 56 ಪರೀಕ್ಷಾ ಕೇಂದ್ರಗಳಿದ್ದು, 20,134 ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.