85ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ: ಸಿದ್ಧತೆ ಕುರಿತು ಇಲ್ಲಿದೆ ಮಾಹಿತಿ - ಗುಲ್ಬರ್ಗಾ ವಿಶ್ವ ವಿದ್ಯಾಲಯ
ಕಲಬುರಗಿ: ಇದೇ ಫೆಬ್ರುವರಿ 5, 6 ಮತ್ತು 7 ರಂದು ಮೂರು ದಿನಗಳ ಕಾಲ ನಡೆಯಲಿರುವ ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆ ಗುಲ್ಬರ್ಗಾ ವಿಶ್ವ ವಿದ್ಯಾಲಯದಲ್ಲಿ ಭರ್ಜರಿ ಸಿದ್ಧತೆ ನಡೆದಿದೆ. ಅಂದಾಜು 15 ಕೋಟಿ ವೆಚ್ಚದಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ಸರ್ಕಾರದಿಂದ ಇದುವರೆಗೆ ನಯಾಪೈಸೆಯೂ ಬಿಡುಗಡೆಯಾಗಿಲ್ಲ ಎಂಬ ಆರೋಪಗಳು ಕೇಳಿಬಂದಿವೆ. ಕೇವಲ 12 ದಿನಗಳು ಮಾತ್ರ ಬಾಕಿ ಉಳಿದರೂ ಅನುದಾನ ಬಾರದಿರುವುದು ಸಾಹಿತ್ಯ ಆಸಕ್ತರಲ್ಲಿ ತೀವ್ರ ಅಸಮಧಾನ ಮೂಡಿಸಿದೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ...