ಖಾಸಗಿ ಬಸ್ ಬ್ರೇಕ್ ಫೇಲ್: ಪ್ರಯಾಣಿಕರ ಪ್ರಾಣ ಉಳಿಸಿತು ಚಾಲಕನ ಸಮಯಪ್ರಜ್ಞೆ - chitradurga district news
ಚಿತ್ರದುರ್ಗ: ಖಾಸಗಿ ಬಸ್ ಬ್ರೇಕ್ ಫೇಲ್ ಆಗಿ ಸಂಭವಿಸಬಹುದಾದ ಭಾರಿ ಅನಾಹುತವೊಂದು ತಪ್ಪಿದೆ. ನಗರದ ಡಿಸಿ ವೃತ್ತದಲ್ಲಿ ಚಳ್ಳಕೆರೆ ಹಾಗೂ ಚಿತ್ರದುರ್ಗ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ನ ಬ್ರೇಕ್ ಫೇಲ್ ಆಗಿದ್ದು, ತಕ್ಷಣ ಎಚ್ಚೆತ್ತುಕೊಂಡ ಚಾಲಕ ಬಸ್ಅನ್ನು ನಿಲ್ಲುಸುವಲ್ಲಿ ಯಶಸ್ವಿಯಾಗಿದ್ದಾನೆ. ಹಾಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಘಟನೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಚಾಲಕ ಹಾಗೂ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.