ಕರ್ನಾಟಕ

karnataka

ETV Bharat / videos

ಬಸ್​ನಲ್ಲಿ ಜನಸಂದಣಿ... ಸಾಮಾಜಿಕ ಅಂತರ ಮರೆತ ಹುಬ್ಬಳ್ಳಿ ಮಂದಿ! - ಹುಬ್ಬಳ್ಳಿ ಲೆಟೆಸ್ಟ್​ ನ್ಯೂಸ್

By

Published : Jul 8, 2020, 12:01 PM IST

ಹುಬ್ಬಳ್ಳಿ: ದಿನದಿಂದ ದಿನಕ್ಕೆ ಕೊರೊನಾ ಆರ್ಭಟಿಸುತ್ತಿದ್ರೂ ಜನ ಎಚ್ಚೆತ್ತುಕೊಳ್ಳುತ್ತಿಲ್ಲ. ಎಲ್ಲಾ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಬಸ್​ನಲ್ಲಿ ಇಂತಿಷ್ಟೇ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಂತೆ ಆದೇಶ ಹೊರಡಿಸಿದೆ. ಆದರೆ ನಗರದಲ್ಲಿ ಸರ್ಕಾರದ ಆದೇಶವನ್ನು ಧಿಕ್ಕರಿಸಿ ಹುಬ್ಬಳ್ಳಿ-ಧಾರವಾಡ ನಡುವೆ ಸಂಚರಿಸುವ ಖಾಸಗಿ ಸಾರಿಗೆ ಬಸ್ ಸಿಬ್ಬಂದಿಯು ಪ್ರಯಾಣಿಕರನ್ನು ಕುರಿಗಳಂತೆ ತುಂಬಿಕೊಂಡು ಸಂಚರಿಸುತ್ತಿದ್ದಾರೆ. ಇದನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದಾರೆ. ಸರ್ಕಾರ ಕೂಡಲೇ ಬಸ್ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ABOUT THE AUTHOR

...view details