SSLC ಪರೀಕ್ಷೆ-ಶಾಲೆಗಳ ಆರಂಭ ವಿಚಾರ: ಶಿಕ್ಷಣ ತಜ್ಞರು, ಪಾಲಕರ ಅಭಿಪ್ರಾಯವೇನು? - ಶಾಲಾ-ಕಾಲೇಜು ತೆರೆಯಲು ಪೋಷಕರ ವಿರೋಧ
🎬 Watch Now: Feature Video
ಕೊರೊನಾ ಮಹಾಮಾರಿಯಿಂದ ದೇಶವೇ ಲಾಕ್ಡೌನ್ ಆದ ಹಿನ್ನೆಲೆ ಶಾಲಾ-ಕಾಲೇಜುಗಳು ಬಂದ್ ಆಗಿದ್ದು, ಪರ್ಯಾಯವಾಗಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಕ್ಲಾಸ್ ಪ್ರಾರಂಭಿಸಲಾಗಿದೆ. ಆದರೆ ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಚಿಕ್ಕೋಡಿ ಭಾಗದ ಮಕ್ಕಳ ಪಾಲಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ರಾಜ್ಯ ಸರ್ಕಾರ ಜೂನ್ 25ರಿಂದ ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸುವ ಹಾಗೂ ಶಾಲೆಗಳನ್ನು ಪ್ರಾರಂಭಿಸುವ ಚಿಂತನೆ ನಡೆಸಿದ್ದು, ಹಲವಾರು ಶಿಕ್ಷಣ ತಜ್ಞರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ನಿವೃತ್ತ ಪ್ರಾಧ್ಯಾಪಕ ಹಾಗೂ ಪಾಲಕರು, SSLC ಪರೀಕ್ಷೆ ನಡೆಸುವುದು ಹಾಗೂ ಶಾಲಾ-ಕಾಲೇಜು ಪ್ರಾರಂಭಿಸುವ ಕುರಿತು ತಮ್ಮ ಅಭಿಪ್ರಾಯಗಳನ್ನು ಈಟಿವಿ ಭಾರತದ ಜೊತೆ ಹಂಚಿಕೊಂಡಿದ್ದಾರೆ.