ದಿಶಾ ರವಿ ಬಿಡುಗಡೆಗೆ ಆಗ್ರಹ: ಕಲಬುರಗಿಯಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ - ಪರಿಸರ ಹೋರಾಟಗಾರ್ತಿ ದಿಶಾ ರವಿ
ಕಲಬುರಗಿ: ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನ ವಿರೋಧಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ಮಾಡಲಾಯಿತು. ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ದಿಶಾ ರವಿ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.