ದೆಹಲಿಯ ತೀಸ್ ಹಜಾರಿ ಕೋರ್ಟ್‌ನಲ್ಲಿ ವಕೀಲರ ಮೇಲೆ ಹಲ್ಲೆ..ಬೆಂಗಳೂರಲ್ಲಿ ಪ್ರತಿಭಟನೆ - lawyer attacked in delhi court case
ದೆಹಲಿಯ ತೀಸ್ ಹಜಾರಿ ಕೋರ್ಟ್ ಆವರಣದಲ್ಲಿ ಪೊಲೀಸರು ವಕೀಲರ ಮೇಲೆ ಹಲ್ಲೆ ನಡೆಸಿದ್ದನ್ನ ಖಂಡಿಸಿ ಇಂದು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ ನೇತೃತ್ವದಲ್ಲಿ ಕೆಂಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯ್ತು. ವಕೀಲರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದು ಖಂಡನೀಯ. ತಪ್ಪಿತಸ್ಥ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಕೀಲರು ಆಗ್ರಹಿಸಿದರು.