ಸಿಎಎ ಮತ್ತು ಎನ್ಆರ್ಸಿ ಕಾಯ್ದೆ ವಿರೋಧ: ರಾಯಬಾಗ ಪಟ್ಟಣ ಬಂದ್ - ಚಿಕ್ಕೋಡಿ ಸುದ್ದಿ
ಸಿಎಎ ಮತ್ತು ಎನ್ಆರ್ಸಿ ಕಾಯ್ದೆ ಜಾರಿ ಖಂಡಿಸಿ ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಬಹುಜನ ಕ್ರಾಂತಿ ಮೋರ್ಚಾ, ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ಮುಸ್ಲಿಂ ಸಂಘಟನೆಗಳು ನೀಡಿದ ರಾಯಬಾಗ ಬಂದ್ ಕರೆಗೆ ವ್ಯಾಪಕ ಬೆಂಬಲ ವ್ಯಕ್ತವಾದ್ದು, 100 ಮೀಟರ್ ಉದ್ದದ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ಬೃಹತ್ ಪ್ರತಿಭಟನಾ ಜಾಥದಲ್ಲಿ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.