ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉಡುಪಿಯಲ್ಲಿ ಜಂಟಿ ಪ್ರತಿಭಟನೆ!! - ಸಿಎಎ ವಿರುದ್ಧ ಜಂಟಿ ಪ್ರತಿಭಟನೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉಡುಪಿ ಜಿಲ್ಲೆ ಕಾಪು ಕ್ಷೇತ್ರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ವಿವಿಧ ಸಂಘ, ಸಂಸ್ಥೆಗಳು ಜಂಟಿಯಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು. ಮೆರವಣಿಗೆ ಉದ್ದಕ್ಕೂ ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲಾಯಿತು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಯು ಆರ್ ಸಭಾಪತಿ, ಚಿಂತಕ ಫಣಿರಾಜ್ ಇದ್ದರು.