ಕೇಂದ್ರದ ಆರ್ಥಿಕ ನೀತಿ ವಿರೋಧಿಸಿ ಸಿಪಿಐಎಂ ಕಾರ್ಯಕರ್ತರ ಪ್ರತಿಭಟನೆ - ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು
ಕೋಲಾರ: ಜನ ವಿರೋಧಿ ಆರ್ಥಿಕ ನೀತಿಯನ್ನು ಕೇಂದ್ರ ಸರ್ಕಾರ ಕೂಡಲೇ ಕೈಬಿಡಬೇಕು ಹಾಗೂ ಜನಪರವಾದ 8 ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೋಲಾರದ ತಹಶಿಲ್ದಾರ್ ಕಚೇರಿ ಎದುರು ಸಿಪಿಐಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಮೆಕ್ಕೆ ವೃತ್ತದಲ್ಲಿರುವ ತಹಶಿಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದ ನೂರಾರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು, ಕೇಂದ್ರ ಸರ್ಕಾರದ ಆರ್ಥಿಕ ನೀತಿಯನ್ನು ಖಂಡಿಸಿದ್ರು. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ಹಕ್ಕೊತ್ತಾಯಕ್ಕಾಗಿ ದೇಶವ್ಯಾಪಿಯಾಗಿ ಇಂದು ಪ್ರತಿಭಟನೆ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ರವಾನಿಸಿದರು.
Last Updated : Oct 15, 2019, 11:31 AM IST