ಮಾಜಿ ಸಚಿವ ಡಿಕೆಶಿ ಬಂಧನ ಖಂಡಿಸಿ ಕೊಡಗಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ - protest against dk shivkumar arrest
ಕೊಡಗು: ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಗಾಂಧಿ ಮೈದಾನದ ಬಳಿ ಪ್ರತಿಭಟನೆ ನಡೆಸಲಾಯಿತು. ಸುರಿಯುತ್ತಿದ್ದ ಮಳೆಯ ನಡುವೆಯೂ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಡಿಕೆಶಿ ಬಂಧನ ರಾಜಕೀಯ ಪ್ರೇರಿತ ಎಂದು ಡಿಕೆಶಿಗೆ ಜೈಕಾರ, ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಎಂದು ಕೂಗಿದರು. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.