ಡಿಕೆಶಿ ಸ್ವಗ್ರಾಮ ದೊಡ್ಡಾಲಹಳ್ಳಿಯಲ್ಲಿ ಪ್ರತಿಭಟನೆ: ಪಲ್ಸರ್ ಬೈಕ್ ಸುಟ್ಟು ಆಕ್ರೋಶ - ramanagara
ರಾಮನಗರ: ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಇಂದು ರಾಮನಗರ ಜಿಲ್ಲಾ ಬಂದ್ಗೆ ಕರೆ ನೀಡಲಾಗಿತ್ತು. ಬಂದ್ ವೇಳೆ ಡಿ.ಕೆ.ಶಿವಕುಮಾರ್ ಸ್ವಗ್ರಾಮ ದೊಡ್ಡಾಲಹಳ್ಳಿಯಲ್ಲಿ ಅಭಿಮಾನಿಗಳು ಬೈಕೊಂದಕ್ಕೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ದೊಡ್ಡಾಲಹಳ್ಳಿಯಲ್ಲಿನ ಸಂಗಮ ರಸ್ತೆ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ವಿರುದ್ದ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಟೈರ್ಗೆ ಬೆಂಕಿ ಹಚ್ಚಿ ಘೋಷಣೆ ಕೂಗುವಾಗ ಪಲ್ಸರ್ ಬೈಕೊಂದನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.