ರಾಷ್ಟ್ರೀಯ ನೇಮಕಾತಿ ನೀತಿ ಹಾಗೂ ಕನ್ನಡ ವಿರೋಧಿ ಧೋರಣೆ ಖಂಡಿಸಿ ಪ್ರತಿಭಟನೆ - ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು
ಧಾರವಾಡ : ರಾಷ್ಟ್ರೀಯ ನೇಮಕಾತಿ ನೀತಿ ಹಾಗೂ ಕನ್ನಡ ವಿರೋಧಿ ಧೋರಣೆ ಖಂಡಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಪ್ರತಿಭಟಿಸಿದರು. ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ಹೊಸ ರಾಷ್ಟ್ರೀಯ ನೀತಿಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಆದಷ್ಟು ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಕನ್ನಡ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.