ರಾಜ್ಯೋತ್ಸವ ಆಚರಿಸಲು ಬಾರದ ಪ. ಪಂ ಮುಖ್ಯಾಧಿಕಾರಿ ವಿರುದ್ಧ ಪ್ರತಿಭಟನೆ
ವಿಜಯಪುರ: ರಾಜ್ಯೋತ್ಸವ ಆಚರಿಸಲು ಕಚೇರಿಗೆ ಬಾರದ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಸುನೀಲ್ ಸಂಬೋಜಿ ವಿರುದ್ಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಆಲಮೇಲ ಪಟ್ಟಣ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಪ.ಪಂ. ಮುಖ್ಯಾಧಿಕಾರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ತಹಶಿಲ್ದಾರರು ಸ್ಥಳಕ್ಕಾಗಮಿಸಿ ಪ್ರತಿಭಟನಾಕಾರರ ಮನವೊಲಿಸಿದರು.