ಕೊರೊನಾ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಮೈಸೂರಲ್ಲಿ ಪ್ರತಿಭಟನೆ - ಮೈಸೂರು ಜಿಲ್ಲಾ ಸುದ್ದಿ
ಕೊರೊನಾ ನಿಯಂತ್ರಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದು, ಆರೋಗ್ಯ ಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಒತ್ತಾಯಿಸಿ ಮೈಸೂರು ಕನ್ನಡ ವೇದಿಕೆ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಕೊರೊನಾದಿಂದ ಸತ್ತಂತ ರೋಗಿಗಳನ್ನು ಪ್ರಾಣಿಗಳಿಗಿಂತಲೂ ಕೀಳಾಗಿ ನೋಡುತ್ತಿರುವುದು ಸಮಾಜಕ್ಕೆ ಕಳಂಕ ಎಂದು ಕಿಡಿಕಾರಿದರು.