ಪಶ್ಚಿಮ ಬಂಗಾಳ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ - mamata banerjee
ಪಶ್ಚಿಮ ಬಂಗಾಳ ಸರ್ಕಾರ ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಹಾವೇರಿಯಲ್ಲಿ ಡಿವೈಎಫ್ಐ ಮತ್ತು ಎಸ್ಎಫ್ಐ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಮಮತಾ ಬ್ಯಾನರ್ಜಿ ಸರ್ಕಾರ ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಜಲ ಫಿರಂಗಿ, ಲಾಠಿ ಚಾರ್ಜ್ ನಡೆಸುವ ಮೂಲಕ ಸರ್ವಾಧಿಕಾರಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.