ಪೌರತ್ವ ಕಾಯ್ದೆ ವಿರೋಧಿಸಿ ಭಟ್ಕಳದಲ್ಲಿ ಪ್ರತಿಭಟನೆ... ಬಿಗಿ ಪೊಲೀಸ್ ಬಂದೋಬಸ್ತ್ - ಭಟ್ಕಳ ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ
ಕಾರವಾರ: ಪೌರತ್ವ ಕಾಯ್ದೆ ವಿರೋಧಿಸಿ ಭಟ್ಕಳದಲ್ಲಿ ಮುಸ್ಲಿಂ ಸಂಘಟನೆಗಳು ಕರೆಕೊಟ್ಟಿರುವ ಪ್ರತಿಭಟನಾ ಮೆರವಣಿಗೆಗೆ ಭಾರಿ ಬೆಂಬಲ ವ್ಯಕ್ತವಾಗಿದ್ದು, ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಗ್ರೌಂಡ್ನಿಂದ ಪ್ರತಿಭಟನಾ ಮೆರವಣಿಗೆಗೆ ಸಿದ್ಧತೆ ಮಾಡಿಕೊಂಡಿದ್ದು, ಶಾಂತಿಯುತ ಪ್ರತಿಭಟನೆಗೆ ಭಟ್ಕಳದ ಮುಸ್ಲಿಂ ಸಮುದಾಯದ ಪರಮೊಚ್ಚ ಸಂಸ್ಥೆ ತಂಜಿಂ ಕರೆಕೊಟ್ಟಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.