ಡಾ. ಬಾಬಾ ಸಾಹೇಬ ಅಂಬೇಡ್ಕರ್ ಮೂರ್ತಿಗೆ ಮಾಡಿರುವ ಅವಮಾನ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ - ಇತ್ತೀಚಿನ ಧಾರವಾಡ ಸುದ್ದಿ
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ಮೂರ್ತಿಗೆ ಅವಮಾನ ಮಾಡಿರುವುದನ್ನು ಖಂಡಿಸಿ ಧಾರವಾಡ ಜಿಲ್ಲಾ ಬಾಬಾಸಾಹೇಬ ಅಂಬೇಡ್ಕರ್ ಲಿಡ್ಕರ್ ಹಿತಾಭಿವೃದ್ಧಿ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ದುಷ್ಕರ್ಮಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೇ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಿ ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಧಾರವಾಡ ಅಪರ ಜಿಲ್ಲಾಧಿಕಾರಿಗಳಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು.