ಕರ್ನಾಟಕ

karnataka

ETV Bharat / videos

ಟಿಪ್ಪು ಜಯಂತಿ ಆಚರಣೆಗೆ ಸ್ಥಳ ನಿರಾಕರಣೆ: ಮೈಸೂರಲ್ಲಿ ರಾತ್ರೋರಾತ್ರಿ ದಿಢೀರ್ ಪ್ರತಿಭಟನೆ

By

Published : Nov 6, 2019, 11:33 PM IST

ಟಿಪ್ಪು ಜಯಂತಿ ಆಚರಣೆಗೆ ಸ್ಥಳ ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ಎನ್.ಆರ್. ಕ್ಷೇತ್ರದ ಶಾಸಕ ತನ್ವೀರ್‌ಸೇಠ್ ನೇತೃತ್ವದಲ್ಲಿ ಮುಡಾ ಕಚೇರಿ ಮುಂಭಾಗ ರಾತ್ರಿ ದಿಢೀರ್ ಪ್ರತಿಭಟನೆ ನಡೆಸಲಾಯಿತು. ಖಾಸಗಿಯಾಗಿ ಟಿಪ್ಪು ಜಯಂತಿ ಆಚರಿಸಲು ಬನ್ನಿಮಂಟಪದ ಕವಾಯತು ಮೈದಾನದಲ್ಲಿ ಅನುಮತಿ ಕೋರಲಾಗಿತ್ತು. ಆದ್ರೆ ಇದಕ್ಕೆ ಅಧಿಕಾರಿಗಳು ಅನುಮತಿ ನಿರಾಕರಿಸಿರುವುದರಿಂದ ನಮ್ಮ ಜನಾಂಗಕ್ಕೆ ರಾಜ್ಯ ಸರ್ಕಾರ ಮೋಸ ಮಾಡುತ್ತಿದೆ ಎಂದು ಆರೋಪಿಸಿ, ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಅವರು ಪ್ರತಿಭಟನಾ ಸ್ಥಳಕ್ಕೆ ಬಂದು, ಸ್ಥಳ ನಿರಾಕರಣೆಗೆ ಸ್ಪಷ್ಟನೆ ನೀಡಬೇಕು ಎಂದು ಪ್ರತಿಭಟನಾಕರರು ಪಟ್ಟು ಹಿಡಿದರು. ಈ ಹಿನ್ನೆಲೆಯಲ್ಲಿ, ಸ್ಥಳಕ್ಕಾಗಮಿಸಿದ ಮುಡಾ ಆಯುಕ್ತ ಪಿ.ಎಸ್. ಕಾಂತರಾಜು ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಆದರೆ ಇದಕ್ಕೆ ಬಗ್ಗದ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆ ಮುಂದುವರೆಸಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿದೆ.

ABOUT THE AUTHOR

...view details