ಸಮಸ್ಯೆಗಳಿಗೆ ಸ್ಪಂದಿಸದ ಜಿ.ಪಂ ಸಿಇಒ: ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ - ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ
ಧಾರವಾಡ: ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಭಿವೃದ್ಧಿ ಕಾಮಗಾರಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಉಪಾಧ್ಯಕ್ಷ ಶಿವಾನಂದ ಕರಿಗಾರ ಹಲವು ದಿನಗಳಿಂದ ಪ್ರತಿಭಟಿಸುತ್ತಿದ್ದಾರೆ. ಈ ಪ್ರತಿಭಟನೆಗೆ ಸಾಮಾನ್ಯ ಸಭೆ ಬಹಿಷ್ಕರಿಸಿ, ಜಿ.ಪಂ.ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ ಇಂದು ಬೆಂಬಲ ಸೂಚಿಸಿದ್ದಾರೆ. ಈ ಪ್ರತಿಭಟನೆಯಿಂದಾಗಿ ಕೋರಂ ಇಲ್ಲದೇ ಸಾಮಾನ್ಯಸಭೆ ಮುಂದೂಡಲಾಗಿದೆ. ಆದರೆ, ಕೆಲ ಸದಸ್ಯರು ಸಾಮಾನ್ಯ ಸಭೆ ನಡೆಸುವಂತೆ ಪಟ್ಟು ಹಿಡಿದಿದ್ದಾರೆ.