ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಂದ್ಗೆ ಉತ್ತಮ ಪ್ರತಿಕ್ರಿಯೆ
ಚಿಕ್ಕಬಳ್ಳಾಪುರ: ರೈತ ವಿರೋಧಿ ಕಾಯ್ದೆ ಖಂಡಿಸಿ ನಡೆಸುತ್ತಿರುವ ಕರ್ನಾಟಕ ಬಂದ್ಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈತಪರ ಸಂಘಟನೆಗಳು, ಕನ್ನಡ ಸಂಘಗಳು, ದಲಿತಪರ ಸಂಘಗಳು ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಬಂದ್ಗೆ ಬೆಂಬಲ ಸೂಚಿಸಿದ್ದಾರೆ ಬಹುತೇಹ ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಈ ಸಂಬಂಧ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.