ಕೋವಿಡ್ ಬಿಕ್ಕಟ್ಟಿನ ಮಧ್ಯೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಪಿಆರ್ಎಸ್ ಕಾರ್ಯಕರ್ತರ ಪ್ರತಿಭಟನೆ
ರಾಯಚೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಹಾಗೂ ಕೆಪಿಆರ್ಎಸ್ ಸಂಘಟನೆಯ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರ ಲಾಕ್ ಡೌನ್ ಜಾರಿ ಮಾಡಿರುವುದರಿಂದ ಕಾರ್ಮಿಕರು, ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಬಿಪಿಎಲ್ ಕುಟುಂಬಗಳು ಹಾಗೂ ಇತರರಿಗೂ ಪಡಿತರ ವಿತರಿಸಬೇಕು. ಲಾಕ್ ಡೌನ್ ಮುಗಿಯುವವರೆಗೆ ಪ್ರತಿ ಕುಟುಂಬಕ್ಕೆ ಮಾಸಿಕ 7,500 ರೂ. ನೀಡಬೇಕು. ಸ್ವ ಸಹಾಯ ಗುಂಪುಗಳಿಗೆ ಬಡ್ಡಿ ರಹಿತ ಸಾಲ ನೀಡಬೇಕು, ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಗಳಿಗೆ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಪ್ರತಿಭಟನಾಕಾರರು ಒತ್ತಾಯಿಸಿದ್ರು.