ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಪ್ರತಿಭಟನೆ.. - ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ
ಯಾದಗಿರಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನ ಹಿಂಪಡೆಯುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದವರು ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಗಾಂಧಿ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪೌರತ್ವ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಒತ್ತಾಯಿಸಿದರು. ಪೊಲೀಸ್ ಭದ್ರತೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮುಸ್ಲಿಂ ಸಮುದಾಯದ ನೂರಾರು ಜನ ಭಾಗಿಯಾಗಿದ್ದರು.