ಎಸ್ಡಿಪಿಐ -ಪಿಎಫ್ಐ ಸಂಘಟನೆಗಳ ನಿಷೇಧಕ್ಕೆ ಒತ್ತಾಯಿಸಿ ಪ್ರತಿಭಟನೆ! - ಶಿವಮೊಗ್ಗ ಪ್ರತಿಭಟನೆ ಲೆಟೆಸ್ಟ್ ನ್ಯೂಸ್
ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಘಟನೆಗಳು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ದೇಶದಲ್ಲಿ ಜಾರಿಗೆ ತಂದಿರುವ ಸಿಎಎ ಹಾಗೂ ಎನ್ಆರ್ಸಿ ಕಾಯ್ದೆಗೆ ಬಂಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆಗಳು ಬೆಂಬಲಿಸುತ್ತವೆ. ಆದ್ರೆ, ಸಿಎಎ ಹಾಗೂ ಎನ್ಆರ್ಸಿ ವಿರೋಧಿಸುವ ಮಾಡುವ ನೆಪದಲ್ಲಿ ರಾಜ್ಯಾದ್ಯಂತ ಹಿಂಸಾಚಾರ ಮಾಡಿರುವ ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳನ್ನು ಕೂಡಲೇ ನಿಷೇಧಿಸಬೇಕು ಹಾಗೂ ಸಂಘಟನೆಯ ಮುಖಂಡರನ್ನು ಬಂಧಿಸಿ ಅವರನ್ನು ತೀವ್ರ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಆಗ್ರಹಿಸಿದರು.
Last Updated : Jan 23, 2020, 8:57 PM IST