ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಪ್ರತಿಭಟನೆ - ಸಾರಿಗೆ ನೌಕರರ ಪ್ರತಿಭಟನೆ
ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು ಎಂದು ಆಗ್ರಹಿಸಿ ರಾಜ್ಯದ ವಿವಿಧೆಡೆಯಿಂದ ಸಾರಿಗೆ ನೌಕರರು ನಗರದ ಫ್ರೀಡಂ ಪಾರ್ಕ್ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಘೋಷಣೆ ಕೂಗಿದರು. ಈ ಕುರಿತು ನಮ್ಮ ಪ್ರತಿನಿಧಿ ಹೆಚ್ಚಿನ ಮಾಹಿತಿ ನೀಡಿದ್ದಾರೆ.