ಡಿಕೆಶಿ ಬಂಧನ ಖಂಡಿಸಿ ಗದಗನಲ್ಲಿ ಕಾಂಗ್ರೆಸ್ ಪ್ರತಿಭಟನೆ - ಡಿಕೆಶಿ ಬಿಡುಗಡೆಗೆ ಆಗ್ರಹ
ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಡಿಕೆಶಿ ಬಂಧನ ಖಂಡಿಸಿ ಗದಗನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ರೋಣ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿಕೆಶಿ ಅಭಿಮಾನಿಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಲ್ಲದೆ, ಡಿಕೆಶಿ ಬಿಡುಗಡೆಗೆ ಆಗ್ರಹಿಸಿದರು.