ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಹೋರಾಟ: ಪೊಲೀಸರು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ - MLA K Shivanagouda
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅರಕೇರಾ ಗ್ರಾಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಕುಡಿವ ನೀರು, ನಿವೇಶನ ಹಕ್ಕು ಪತ್ರ ಸೇರಿದಂತೆ ಮೂಲ ಸೌಕರ್ಯಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ವೇಳೆ ಪೊಲೀಸರು ಮತ್ತು ಪ್ರತಿಭಟನಾ ನಿರತರ ನಡುವೆ ಮಾತಿನ ಚಕಮಕಿ ನಡೆದು ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಅರಕೇರಾ ಮಾಜಿ ಸಂಸದ ಬಿ.ವಿ.ನಾಯಕ್ ಹಾಗೂ ಹಾಲಿ ಶಾಸಕ ಕೆ.ಶಿವನಗೌಡ ನಾಯಕ ಸ್ವಕ್ಷೇತ್ರವಾಗಿದೆ.