ಹಥ್ರಾಸ್ ಪ್ರಕರಣ ಖಂಡಿಸಿ ಬಿಬಿಎಂಪಿ ಪೌರಕಾರ್ಮಿಕರಿಂದ ಪ್ರತಿಭಟನೆ - Protest in bangalore
ಉತ್ತರಪ್ರದೇಶದ ಹಥ್ರಾಸ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಖಂಡಿಸಿ ಪೌರಕಾರ್ಮಿಕರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆ ವತಿಯಿಂದ ಕೆ.ಆರ್.ಪುರಂ, ಬಾಣಸವಾಡಿ, ಹಲಸೂರು, ಜೋಗುಪಾಳ್ಯ, ಆರ್.ಆರ್. ನಗರದಲ್ಲಿ ಪ್ರತಿಭಟನೆ ನಡೆಸಿದರು. ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ನಿಲ್ಲಬೇಕು ಎಂದು ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು.