ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭುಗಿಲೆದ್ದ ಆಕ್ರೋಶ... ಪ್ರತಿಭಟನೆ ಕೈ ಶಾಸಕ ಸಾಥ್ - ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಪ್ರಗತಿಪರ ಚಿಂತಕರಿಂದ ಆಕ್ರೋಶ
ಪೌರತ್ವ ತಿದ್ದುಪಡಿ ಕಾಯ್ದೆಯನ್ನ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಜೋರಾಗಿದ್ದು, ಇದೀಗ ಬೆಂಗಳೂರಿನಲ್ಲಿಯೂ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಬೆಳಗ್ಗೆಯಿಂದ ಹಂತ ಹಂತವಾಗಿ ನಗರದ ವಿವಿಧೆಡೆ ಪ್ರತಿಭಟನೆ ಕೈಗೊಂಡಿರುವ ಪ್ರಗತಿ ಪರ ಚಿಂತಕರು, ಹಾಗೂ ಮುಸ್ಲೀಂ ಸಮುದಾಯದವರು ಮೋದಿ, ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಶಾಸಕ ರಿಜ್ವಾನ್ ಅರ್ಷದ್ ಕೂಡಾ ಪ್ರತಿಭಟನೆಗೆ ಸಾಥ್ ನೀಡಿದ್ದು, ಪ್ರತಿಭಟನಾಕಾರರನ್ನು ಹತೋಟಿಗೆ ತರುವಲ್ಲಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.