ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ.. - farmer problems
ಧಾರವಾಡ:ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲೆಯ ಅದರಗುಂಚಿ ಗ್ರಾಮದ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿಯೊಂದಿಗೆ ಆಗಮಿಸಿ ಜಿಲ್ಲಾಧಿಕಾರಿ ದೀಪಾ ಚೋಳನ ಹಾಗೂ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಸರ್ಕಾರದ ವಿರುದ್ದ ಘೋಷಣೆ ಕೂಗಿದ ರೈತರು, ಬೆಳೆಹಾನಿಗೆ ಸೂಕ್ತ ಪರಿಹಾರ ನೀಡಬೇಕು. ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.