ಕೊಪ್ಪಳ ಜಿಲ್ಲಾಡಳಿತ ಭವನದ ಮುಂದೆ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದಿಂದ ಪ್ರತಿಭಟನೆ - koppala latest news
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಕಾರ್ಯಕರ್ತರು 48 ಗಂಟೆಗಳ ಕಾಲ ಅಹೋರಾತ್ರಿ ಧರಣಿ ಪ್ರಾರಂಭಿಸಿದ್ದಾರೆ. ನಗರದ ಜಿಲ್ಲಾಡಳಿತ ಭವನದ ಮುಂದೆ ಧರಣಿ ಸತ್ಯಾಗ್ರಹ ಪ್ರಾರಂಭಿಸಿದ್ದು, ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರ ಕೂಗಿದ್ದಾರೆ.