ಪೌರತ್ವ ಕಾಯ್ದೆ ವಿರೋಧಿಸಿ ಗದಗದಲ್ಲಿ ಧರಣಿ
ಗದಗ: ಪೌರತ್ವ ಕಾಯ್ದೆ ವಿರೋಧಿಸಿ ಗದಗದಲ್ಲಿ ಧರಣಿ ನಡೆಸಲಾಯಿತು. ನಗರದ ಜಿಲ್ಲಾಡಳಿತ ಭವನದ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ನಡೆದ ಈ ಧರಣಿಯಲ್ಲಿ ಸಿಎಎ, ಎನ್ಆರ್ಸಿ, ಎನ್ಪಿಆರ್ ನಿಷೇಧ ಮಾಡಬೇಕು ಎಂದು ಒತ್ತಾಯಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಧರಣಿನಿರತರು, ಕೂಡಲೇ ಪೌರತ್ವ ಕಾಯ್ದೆ ರದ್ದು ಮಾಡಬೇಕು ಎಂದು ಆಗ್ರಹಿಸಿದರು.