ಎಂಇಎಸ್ ಸಂಘಟನೆ ನಿಷೇಧಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ - Kalburgi Protest News
ಬೆಳಗಾವಿಯ ಪೀರನವಾಡಿ ಘಟನೆ ಖಂಡಿಸಿ ಹಾಗೂ ಎಂಇಎಸ್ ಸಂಘಟನೆ ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು, ಬೆಳಗಾವಿಯ ಪೀರನವಾಡಿ ಘಟನೆಗೆ ಕಾರಣರಾದ ಶಿವಸೇನೆ ಹಾಗೂ ಎಂಇಎಸ್ ಕಾರ್ಯಕರ್ತರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ತೆರವುಗೊಳಿಸಲಾದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪಿಸಿ ಗಲಭೆಗೆ ಕಾರಣವಾದ ಎಂಇಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕು. ಅಲ್ಲದೆ ಕನ್ನಡಪರ ಹೋರಾಟಗಾರರ ಮೇಲೆ ದಾಖಲಿಸದ ಕೇಸ್ಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದರು.