ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಂಗಳೂರಿನಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ! - mangalore protest latest news
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ನೌಕರರು ಇಂದು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಕೊಟ್ಟಾರದಲ್ಲಿರುವ ದ.ಕ ಜಿ.ಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ಅಡ್ಡಿಪಡಿಸಿರುವುದನ್ನು ಖಂಡಿಸಿದರು. ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಜಾರಿಗೊಳಿಸಬೇಕು, ಬಿಸಿಯೂಟ ನೌಕರರನ್ನು ಡಿ ಗ್ರೂಪ್ ನೌಕರರೆಂದು ಪರಿಗಣಿಸಬೇಕು, ಹಾಜರಾತಿ ಆಧಾರದಲ್ಲಿ ಕೆಲಸದಿಂದ ತೆಗೆದು ಹಾಕುವ ಕ್ರಮ ನಿಲ್ಲಿಸಬೇಕೆಂದು ಒತ್ತಾಯಿಸಿದರು.