ಪ್ರತಿಭಟನೆ ವೇಳೆ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಈ ಏಟು! ವಿಡಿಯೋ - ರ‍್ಯಾಲಿ
ಡಿಕೆಶಿ ಬಂಧನ ಖಂಡಿಸಿ ಪ್ರತಿಭಟನೆ ಮತ್ತೆ ಮುಂದುವರಿದಿದೆ. ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದ ಬಳಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಇತರ ಬಿಜೆಪಿ ನಾಯಕರುಗಳ ಭಾವಚಿತ್ರಕ್ಕೆ ಪ್ರತಿಭಟನಾಕಾರರು ಚಪ್ಪಲಿಯಿಂದ ಹೊಡೆದ ಘಟನೆ ನಡೆದಿದೆ. ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ರ‍್ಯಾಲಿ ಮೂಲಕ ತೆರಳಿದ ಫ್ರತಿಭಟನಾಕಾರರು ಅಪರ ಜಿಲ್ಲಾಧಿಕಾರಿಗಳಿಗೆ ಪ್ರಕರಣದ ಸೂಕ್ತ ತನಿಖೆಗಾಗಿ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ಒಕ್ಕಲಿಗ ಸಂಘದ ಮುಖಂಡರು ಭಾಗವಹಿಸಿದ್ದರು.