ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭಿಸುವಂತೆ ಆಗ್ರಹಿಸಿ ರಾಯಚೂರಿನಲ್ಲಿ ಪ್ರತಿಭಟನೆ - raichur latest news
ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭಿಸುವಂತೆ ಆಗ್ರಹಿಸಿ ರಾಯಚೂರಿನಲ್ಲಿ ಸಿಐಟಿಯು ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸರ್ಕಾರ ಐಸಿಡಿಎಸ್ ಯೋಜನೆಯನ್ನು ದುರ್ಬಲಗೊಳಿಸಿ, ಎಲ್ಕೆಜಿ, ಯುಕೆಜಿಯನ್ನ ಪೂರ್ವಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭಿಸಲು ಹೊರಟಿದ್ದು, ಇದರಿಂದ ಅಂಗನನವಾಡಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ತೊಂದರೆ ಉಂಟಾಗಲಿದೆ ಎಂದು ದೂರಿದ್ರು. ಈ ಕೂಡಲೇ ರಾಜ್ಯ ಸರ್ಕಾರ ಈ ನೀತಿಯನ್ನ ಕೈಬಿಟ್ಟು, ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿಯನ್ನ ಮುಂದುವರೆಸಬೇಕೆಂದು ಒತ್ತಾಯಿಸಿದ್ರು. ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರಿನ ಟಿಪ್ಪು ಸುಲ್ತಾನ್ ಗಾರ್ಡನ್ನಲ್ಲಿ ಬಹಿರಂಗ ಸಭೆ ನಡೆಸಿದರು.