ಸಾಮೂಹಿಕ ಅತ್ಯಾಚಾರ ಪ್ರಕರಣ.. ಕಪ್ಪುಬಟ್ಟೆ ಧರಿಸಿ ಏಕಾಂಗಿ ಮೌನ ಪ್ರತಿಭಟನೆ..
ಶಿವಮೊಗ್ಗ : ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ಗಂಧದಗುಡಿ ಫೌಂಡೇಶನ್ನ ಜಿಲ್ಲಾಧ್ಯಕ್ಷ ವೇಣುಗೋಪಾಲ್ ಕಪ್ಪುಬಟ್ಟೆ ಧರಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಏಕಾಂಗಿ ಮೌನ ಪ್ರತಿಭಟನೆ ನಡೆಸಿದರು. ಬಾಲಕಿಗೆ ಊಟ ಕೊಡಿಸುವುದಾಗಿ ಹೇಳಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಕಾಮುಕರನ್ನು ಗಲ್ಲಿಗೆರಿಸಬೇಕು ಎಂದು ಆಗ್ರಹಿಸಿ ಏಕಾಂಗಿ ಮೌನ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.