ಡಿಕೆಶಿ ಬಂಧನ ಖಂಡಿಸಿ ಬೆಂಗಳೂರು, ತುಮಕೂರಿನಲ್ಲಿ ಇಂದೂ ಪ್ರತಿಭಟನೆ - ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ
ಬೆಂಗಳೂರು: ಭೀಕರ ನೆರೆ ಹಾವಳಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕದ ನೆರೆ ಹಾವಳಿ ಪ್ರದೇಶವನ್ನು ನೋಡಲು ಬಾರದ ಪ್ರಧಾನ ಮಂತ್ರಿ ,ಈಗ ಚಂದ್ರಯಾನ ನೋಡಲು ಕರ್ನಾಟಕಕ್ಕೆ ಬರುತ್ತಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರು ಪ್ರತಿಭಟನೆ ಮಾಡಿದರು. ಈಗ ಮೋದಿ ಚಂದ್ರಯಾನ ನೋಡುವುದರ ಜೊತೆಗೆ ಉತ್ತರ ಕರ್ನಾಟಕದಲ್ಲಿ ಸಂಕಷ್ಟದಲ್ಲಿರುವ ನೆರೆ ಸಂತ್ರಸ್ತರ ಪ್ರದೇಶಕ್ಕೆ ಭೇಟಿ ನೀಡಿ, ಅವರಿಗೆ ಸೂಕ್ತ ಪರಿಹಾರವನ್ನು ನೀಡಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರು ಆಗ್ರಹಿಸಿದರು. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಡಿಯೂರಿನಲ್ಲಿ ಯೂತ್ ಕಾಂಗ್ರೆಸ್ ಮತ್ತು ಸ್ಥಳೀಯ ಕಾಂಗ್ರೆಸ್ ಮುಖಂಡರು ಪ್ರತಿಭಟನಾ ಮೆರವಣಿಗೆ ನಡೆಸಿ ರಸ್ತೆಯಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.