ದೇಶ ವಿರೋಧಿ ಘೋಷಣೆ ಕೂಗಿದ ಅಮೂಲ್ಯ ವಿರುದ್ಧ ವಿಜಯಪುರದಲ್ಲಿ ಪ್ರತಿಭಟನೆ - Protest in Vijayapur
ವಿಜಯಪುರ: ದೇಶ ವಿರೋಧಿ ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ವಿರುದ್ಧ ಪ್ರಗತಿಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ್ದ ಸಂಘಟನೆ ಕಾರ್ಯಕರ್ತರು, ಅಮೂಲ್ಯ ಲಿಯೋನಾ ವಿರುದ್ಧ ಘೋಷಣೆ ಕೂಗಿದರು. ಅಮೂಲ್ಯ ಅಂತವರಿಂದ ಜನರ ಭಾವನೆಗಳಿಗೆ ಧಕ್ಕೆಯಾಗುತ್ತಿದೆ. ಸರ್ಕಾರ ಇಂತವರ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.