ವಿವಿಧ ಬೇಡಿಕೆಗೆ ಆಗ್ರಹಿಸಿ ಕರ್ನಾಟಕ ಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನಾ ರ್ಯಾಲಿ - ಬೆಳಗಾವಿಯಿಂದ ಬೆಂಗಳೂರಿನವರೆಗೆ ಪ್ರತಿಭಟನಾ ರ್ಯಾಲಿ
ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪರ ಸಂಘಟನೆಗಳ ಒಕ್ಕೂಟದಿಂದ ಬೆಳಗಾವಿಯಿಂದ ಬೆಂಗಳೂರಿನವರೆಗೆ ಸುಮಾರು 600 ಕಿಮಿ ವರೆಗೆ ಫೆಬ್ರವರಿ 15 ರಿಂದ 18 ರವರಗೆ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಮಹದಾಯಿ ಯೋಜನೆ, ನೆರೆ ಸಂತ್ರಸ್ತರಿಗೆ ಪರಿಹಾರ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ನಾಮಕರಣ, ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಈ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು, ಇಂದು ಪ್ರತಿಭಟನಾ ರ್ಯಾಲಿ ದಾವಣಗೆರೆಗೆ ಆಗಮಿಸಿ ನಂತರ ಚಿತ್ರದುರ್ಗದ ಕಡೆಗೆ ಪ್ರಯಾಣ ಬೆಳೆಸಿತು.