ಸಮಗಾರ ಶ್ರೀ ಹರಳಯ್ಯನವರ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ
ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟ ಅನುದಾನದಡಿಯಲ್ಲಿ ನಗರದಲ್ಲಿ ಶಿವಶರಣ ಸಮಗಾರ ಶ್ರೀ ಹರಳಯ್ಯನವರ ಪ್ರತಿಮೆಯನ್ನು ಸ್ಥಾಪಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಲಿಡ್ಕರ್ ಹಿತಾಭಿವೃದ್ಧಿ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ಈಗಾಗಲೇ ಈ ಹಿಂದಿನ ಸರ್ಕಾರಕ್ಕೆ ಶ್ರೀ ಸಮಗಾರ ಹರಳಯ್ಯ ಪ್ರತಿಮೆ ಸ್ಥಾಪನೆಗೆ ಹಲವು ಬಾರಿ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ, ಈಗ ಹೊಸ ಸರ್ಕಾರ ರಚನೆ ಆಗಿರುವುದರಿಂದ ನಮ್ಮ ಮನವಿಗೆ ಸ್ಪಂದಿಸಿ ಸಮಗಾರ ಹರಳಯ್ಯ ಪ್ರತಿಮೆ ಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.