ಜಾಲಹಳ್ಳಿ ತಾಲೂಕು ಕೇಂದ್ರವಾಗಿ ಘೋಷಿಸಲು ಆಗ್ರಹಿಸಿ ಪ್ರತಿಭಟನೆ - ಜಾಲಹಳ್ಳಿ ತಾಲೂಕು ಹೋರಾಟ ಸಮಿತಿ
ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಹೋಬಳಿಯನ್ನ ತಾಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಆಗ್ರಹಿಸಿ ಜಾಲಹಳ್ಳಿ ತಾಲೂಕು ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬೆಳಗ್ಗೆಯಿಂದಲೇ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ, ಬೈಕ್ ರ್ಯಾಲಿ ನಡೆಸಲಾಯಿತು. ಬಸವೇಶ್ವರ ವೃತ್ತದಿಂದ ನಾಡ ಕಚೇರಿವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುವ ಮೂಲಕ ಜಾಲಹಳ್ಳಿಯನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಲು ಆಗ್ರಹಿಸಲಾಯಿತು.